ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ (Cheque Bounce Case) ಮಾಜಿ ಸಚಿವ ಬಿ.ನಾಗೇಂದ್ರ (B.Nagendra)ಗೆ ಸಂಕಷ್ಟ ಶುರುವಾಗಿದೆ.
ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಮೂವರಿಗೆ 42ನೇ ಎಸಿಜೆಎಂ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಬಿ.ನಾಗೇಂದ್ರ ಸೇರಿದಂತೆ ಮೂವರಿಗೆ 1.25 ಕೋಟಿ ರೂ. ದಂಡ ಪಾವತಿಸುವಂತೆ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ದಂಡ ಪಾವತಿಸದಿದ್ದರೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ನಾಗೇಂದ್ರ ಸೇರಿದಂತೆ ಮೂವರ ವಿರುದ್ಧ ವಿಎಸ್ಎಲ್ ಸ್ಟೀಲ್ಸ್ ಲಿಮಿಟೆಡ್ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿತ್ತು.