ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಸಕರ ಹಲವಾರು ದಿನಗಳಿಂದ ಅಪರೂಪದ ಜ್ವರಕ್ಕೆ ತುತ್ತಾಗಿದ್ದರು ಎನ್ನಲಾಗಿದೆ. ಹೀಗಾಗಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಕಾಣಿಸಿಕೊಂಡ ಜ್ವರ ಮ್ಯೂಟೆಂಟ್ ಚಿಕನ್ ಗುನ್ಯಾ ಎಂದು ಹೇಳಲಾಗುತ್ತಿದೆ. ಅಲ್ಲದೇ ಬ್ರೈನ್ ಮತ್ತು ಸ್ಪೈನಲ್ ಕಾರ್ಡ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರು ಮಾತನಾಡಲು ಆಗದಷ್ಟು ಸುಸ್ತಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪರೂಪದ ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿರುವ ಸುರೇಶ್ ಕುಮಾರ್ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಏಳು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರ ಆರೋಗ್ಯದ ಕುರಿತು ಅಭಿಮಾನಿಗಳು, ರಾಜಕೀಯ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ.