ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಆಗಿದ್ದಾರೆ.
ನಗರದ ಕೂಳೂರು ಬ್ರಿಡ್ಜ್ ಮೇಲೆ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಅವರ ಕಾರು ಕೂಡ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮಾಜಿ ಶಾಸಕರ ಪುತ್ರ ಸಾಯುತ್ತೇನೆ ಎಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಸದ್ಯ ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ವಿವಿಧ ಉದ್ಯಮ ಮತ್ತು ಮಸೀದಿ ಕಮೀಟಿಗಳಲ್ಲಿ ಅಲಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಭೇಟಿ ನೀಡಿದ್ದು, ಅವರ ಮುಂದೆ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯೆ ನೀಡಿದ್ದು, ಭಾನುವಾರ ಬೆಳಿಗ್ಗೆ ಮನೆಯಲ್ಲಿನ ಕೆಲವು ಕಾರಣದಿಂದ ಕಾರಿನಲ್ಲಿ ಬಂದಿದ್ದಾರೆ. ಕುಳೂರು ಸೇತುವೆಯಲ್ಲಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.
ಸೇತುವೆಯಿಂದ ಕೆಳಗೆ ಹಾರಿರುವ ಕುರಿತು ಸಂಶಯ ಇದೆ. ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ಎಸ್ಎಲ್ ಅಧಿಕಾರಿಗಳು ಕಾರು ಪರಿಶೀಲನೆ ನಡೆಸಿದ್ದಾರೆ ಎಂದಿದ್ದಾರೆ.