ಬೆಂಗಳೂರು: ಮಾಜಿ ರೌಡಿಶೀಟರ್ ಫೈಟರ್ ರವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೈಟರ್ ರವಿ ಕಳೆದ ಬಾರಿಯ ಚುನಾವಣೆಯಲ್ಲಿ ನಾಲಮಂಗಲದಿಂದ ಸ್ಪರ್ಧಿಸಿದ್ದರು. ಅವರು ಹಿಂದೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.
ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಪೋಟೊದಲ್ಲಿ ಕಾಣಿಸಿಕೊಂಡಿದ್ದಕ್ಕೆ ಕಾಂಗ್ರೆಸ್ ಟೀಕೆ ಮಾಡಿತ್ತು. ಈಗ ಕೊಲೆ ಯತ್ನ ಪ್ರಕರಣದಲ್ಲಿ ಫೈಟರ್ ರವಿಯನ್ನು ವಶಕ್ಕೆ ಪಡೆಯಲಾಗಿದೆ. ಗನ್ ತೋರಿಸಿ ಕೊಲೆ ಯತ್ನ ಆರೋಪದಲ್ಲಿ ಫೈಟರ್ ರವಿ ಅರೆಸ್ಟ್ ಆಗಿದ್ದಾರೆ. ಸದಾಶಿವನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.