ಹಾಸನ : ಚಾಲಕನ ನಿಯಂತ್ರಣ ತಪ್ಪಿದ ಫಾರ್ಚುನರ್ ಕಾರು ರಸ್ತೆ ಬದಿಯ ಮನೆಗೆ ನುಗ್ಗಿದ ಪರಿಣಾಮ ಕಾರಲ್ಲಿದ್ದ ಐದು ಜನ ಯುವಕರು ಗಾಯಗೊಂಡಿರುವ ಘಟನೆ ಹಾಸನ ತಾಲೂಕಿನ ಯಲಗುಂದ ಗ್ರಾಮದಲ್ಲಿ ಕಳೆದ ರಾತ್ರಿ ಸಂಭವಿಸಿದೆ.
ಅತೀ ವೇಗದಲ್ಲಿ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ಕಾಂಪೌಂಡ್ ಹಾರಿ ಮನೆಗೆ ಕಾರು ಗುದ್ದಿದೆ. ಪರಿಣಾಮ ಮನೆಯ ಚಾವಣಿ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಘಟನೆ ಬಳಿಕ ಸ್ಥಳೀಯರು ಆಗಮಿಸಿ, ಗಾಯಾಳುಗಳನ್ನು ರಕ್ಷಿಸಿದ್ದಾರೆ.
KA 02 ಎಂ ಯು 4538 ನಂಬರ್ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದುದ್ಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ : ಕ್ಯಾಚ್ ಕೈಚೆಲ್ಲುವಲ್ಲಿ ಭಾರತವೇ ನಂ.1 | ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ವೇಗಿ!



















