ದಾವಣಗೆರೆ : ದಾವಣಗೆರೆಯ ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳು ಸರಣಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಡೆದಿದೆ.
ಕಳೆದ ನಾಲ್ಕು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ‘ಹೆಮರಾಜಿಕ್ ಸೆಪ್ಟಿಸೆಮಿಯಾ’ (HS) ಎಂಬ ಸಾಂಕ್ರಾಮಿಕ ರೋಗವಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಮೃತ ಜಿಂಕೆಗಳ ಅಂಗಾಗಗಳನ್ನು ಲ್ಯಾಬ್ಗೆ ಕಳುಹಿಸಿ, ತಾತ್ಕಾಲಿಕ ಸಾರ್ವಜನಿಕ ವೀಕ್ಷಣೆಗೆ ನಿರ್ಬಂಧ ಹೇರಿದೆ.
ಮೃಗಾಲಯದಲ್ಲಿ ಒಟ್ಟು 170 ಚುಕ್ಕೆ ಜಿಂಕೆಗಳಿದ್ದು ಅದರಲ್ಲಿ 94 ಹೆಣ್ಣು, 58 ಗಂಡು ಹಾಗೂ 18 ಮರಿಗಳಿವೆ. ಸದ್ಯ 4 ಸಾವನ್ನಪ್ಪಿರುವುದರಿಂದ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸುವಂತೆ ಕಿರು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ಅವರು ಕೋರಿದ್ದಾರೆ.
ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ರಸ್ತೆ ಬದಿ ಅಂಗಡಿಗಳಿಗೆ ಕಾರು ನುಗ್ಗಿಸಿದ ಚಾಲಕ | ಇಬ್ಬರು ಸಾವು



















