ಯಾದಗಿರಿ: ರಾಜ್ಯದಲ ಹಲವೆಡೆ ಗುಡುಗು- ಸಿಡಿಲು ಸಹಿ. ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ಥವಾಗಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿ ಜಮೀನಿನಲ್ಲಿ ಈ ಘಟನೆ ನಡೆದಿದೆ. ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಸಾವನ್ನಪ್ಪಿದ ದುರ್ದೈವಿಗಳು. ಅಲ್ಲದೇ, ಸಿಡಿಲು ಬಡಿದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.