ಬೆಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯಲ್ಲೇ ತಂದೆ ಹಾಗೂ ಒಬ್ಬ ಮಗ ಸಾವನ್ನಪ್ಪಿದರೆ, ಅಸ್ವಸ್ಥಗೊಂಡಿದ್ದ ತಾಯಿ ಮತ್ತು ಇನ್ನೊಬ್ಬ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಹೆಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ತಂದೆ ಕುಮಾರಪ್ಪ ನೇಣಿಗೆ ಶರಣಾಗಿದ್ದಾರೆ. ಅನಂತರ ತಾಯಿ ಮತ್ತು ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿದ್ದಾರೆ. ಕುಮಾರಪ್ಪ (60) ಮತ್ತು ಆತನ ಮಗ ಅರುಣ್(30) ಮನೆಯಲ್ಲೇ ಸಾವನ್ನಪ್ಪಿದ್ದಾರೆ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದುರ್ದೈವಿಗಳ ಬಳಿ ಮದ್ಯದ ಬಾಟಲಿ ಮತ್ತು ವಿಷದ ಬಾಟಲಿ ಪತ್ತೆಯಾಗಿದ್ದು, ಇವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಸಂಪನ್ಮೂಲ ವ್ಯಕ್ತಿಗಳ ನೇಮಕ: ಮೈಸೂರಿನಲ್ಲೇ ಉದ್ಯೋಗ



















