ಬೀದರ್ | ಜಿಲ್ಲೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಜನವಾಡ ಗ್ರಾಮದ ಸಮೀಪ ಅಕ್ರಮವಾಗಿ ಸಿಲಿಂಡರ್ ಸಂಗ್ರಹಿಸಿ ಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಹೊಲದಲ್ಲಿ ಸಂಗ್ರಹಿಸಲಾಗಿದ್ದ 105 ಗ್ಯಾಸ್ ಸಿಲಿಂಡರ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಜಪ್ತಿಯಾದ ಸಿಲಿಂಡರ್‌ಗಳ ಒಟ್ಟು ಮೌಲ್ಯ ಸುಮಾರು ₹2.55 ಲಕ್ಷಕ್ಕೂ ಅಧಿಕವಾಗಿದೆ ಎಂದು ತಿಳಿದುಬಂದಿದೆ.
ಸಾಮಾನ್ಯವಾಗಿ ₹1000 ದರ ಇರುವ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ₹2000ಕ್ಕೂ ಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿತ್ತು. ಜನರ ಅಗತ್ಯವನ್ನು ದುರುಪಯೋಗ ಮಾಡಿಕೊಂಡು ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಈ ಅಕ್ರಮ ನಡೆಯುತ್ತಿತ್ತು. ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ನಾಲ್ಕು ಎಜೆನ್ಸಿಗಳ ಪಾತ್ರವೂ ಬಹಿರಂಗವಾಗಿದೆ.
ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜನರ ಸಮಸ್ಯೆಯನ್ನು ದುರುಪಯೋಗ ಮಾಡಿಕೊಂಡವರಿಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!



















