ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ನಡೆಯಲಿರುವ 5 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಸಜ್ಜಾಗುತ್ತಿದ್ದ ವೇಳೆಯೇ ಆತಂಕವೊಂದು ಕಾಡುತ್ತಿದೆ. ಅಭ್ಯಾಸ ಪಂದ್ಯದಲ್ಲೇ ನಾಲ್ವರು ಆಟಗಾರರು ಗಾಯಗೊಂಡಿದ್ದಾರೆ. ಇದು ಭಾರತದ ಆತಂಕಕ್ಕೆ ಕಾರಣವಾಗಿದೆ.
ನವೆಂಬರ್ 22 ರಿಂದ ಟೂರ್ನಿ ಆರಂಭವಾಗಲಿದೆ. ಈ ಸರಣಿ ಭಾರತದ ಪಾಲಿಗೆ ಮಹತ್ವ ಪಡೆದಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಗೆ ಎಂಟ್ರಿ ಕೊಡಬೇಕಾದರೆ, ಭಾರತ ತಂಡ ಈ ಸರಣಿಯ ಎಲ್ಲ ಪಂದ್ಯ ಅಥವಾ ನಾಲ್ಕು ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಹೀಗಾಗಿ ಭಾರತ ತಂಡ ಈ ಟೂರ್ನಿಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಅಲ್ಲದೇ, ನ್ಯೂಜಿಲೆಂಡ್ ವಿರುದ್ಧದ ಸೋಲಿನಿಂದ ಕಂಗೆಟ್ಟಿರುವ ಭಾರತಕ್ಕೆ ಈ ಸರಣಿಯ ಗೆಲವು ಮಹತ್ವ ಪಡೆದಿದೆ. ಈ ಮಧ್ಯೆ ಸ್ಟಾರ್ ಆಟಗಾರ ಗಾಯ ತಲೆನೋವಿಗೆ ಕಾರಣವಾಗಿದೆ.
ಸರಣಿಯ ಮೊದಲ ಪಂದ್ಯ ಪರ್ತ್ ಕ್ರೀಡಾಂಗಣದಲ್ಲಿ ನಡೆಯಲಿದೆ. ತಂಡದ ನಾಲ್ವರು ಆಟಗಾರರು ಇಂಜುರಿಯಿಂದ ಬಳಲುತ್ತಿದ್ದಾರೆ. ಇದರೊಂದಿಗೆ ನಾಯಕ ರೋಹಿತ್ ಶರ್ಮಾ ಕೂಡ ಆಡುವುದು ಡೌಟ್ ಎನ್ನಲಾಗುತ್ತಿದೆ. ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಗಾಯಗೊಂಡಿದ್ದು, ಭಾರತ ಎ ವಿರುದ್ಧದ ಪಂದ್ಯದ ವೇಳೆ ಸ್ಲಿಪ್ ಕ್ಯಾಚ್ ತೆಗೆದುಕೊಳ್ಳುವಾಗ ಗಿಲ್ ಅವರ ಬೆರಳಿಗೆ ಗಾಯವಾಗಿದೆ. ನ. 14 ರಂದು WACA ನಲ್ಲಿ ಭಾರತದ ಅಭ್ಯಾಸದ ವೇಳೆ ಬ್ಯಾಟಿಂಗ್ ಮಾಡುವಾಗ ಯುವ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಮೊಣಕೈಗೆ ಗಾಯ ಮಾಡಿಕೊಂಡಿದ್ದರು. ಅಭ್ಯಾಸದ ವೇಳೆ ಕೆಎಲ್ ರಾಹುಲ್ ಕೂಡ ಗಾಯಗೊಂಡಿದ್ದಾರೆ. ನವೆಂಬರ್ 15 ರಂದು ಸೆಂಟರ್ ವಿಕೆಟ್ ಮ್ಯಾಚ್ ಸಿಮ್ಯುಲೇಶನ್ ಸಮಯದಲ್ಲಿ ರಾಹುಲ್ ಬಲ ಮೊಣಕೈಗೆ ಗಾಯವಾಗಿದೆ. ಹೀಗಾಗಿ ಅವರು ಅರ್ಧಕ್ಕೆ ಬ್ಯಾಟಿಂಗ್ ನಿಲ್ಲಿಸಿ ಮರಳಿ ಹೋಗಿದ್ದರು.
ವಿರಾಟ್ ಕೊಹ್ಲಿ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರ ಗಾಯದ ಸ್ಕ್ಯಾನ್ ವರದಿ ಹೊರಬಿದ್ದ ಬಳಿಕ ಆಯ್ಕೆಗಾರರು ನಿರಾಳರಾಗಿದ್ದಾರೆ. ಹೀಗಾಗಿ ಭಾರತಕ್ಕೆ ಆತಂಕ ಶುರುವಾಗಿದೆ.