ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದ ಪರಿಣಾಮ ಕನಿಷ್ಠ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ.
ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ 60ಕ್ಕೂ ಅಧಿಕ ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕ್ರೇನ್‌ಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯಿಂದಾಗಿ ಕುಸಿದಿದೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


















