ದಾವಣಗೆರೆ: ಮ್ಯಾಟ್ರಿಮೋನಿಯಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಂಡು ವಂಚಿಸುವ ಕಾಯಕವನ್ನೇ ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಂ.ಮಧು(31) ಬಂಧಿತ ಆರೋಪಿ. ಈತ ಮ್ಯಾಟ್ರಿಮೋನಿಯಲ್ಲಿ ತಾನು ವರ ಎಂದು ತನ್ನ ವಿವರ ಹಾಕಿಕೊಂಡು ಯುವತಿಯರನ್ನು ಪರಿಚಯ ಮಾಡಿಕೊಂಡು ವಂಚಿಸುತ್ತಿದ್ದ. ಹೀಗೆ ಅಮಾಯಕ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ಈತ ಮಂಡ್ಯ ತಾಲೂಕಿನ ಮಾಚನಹಳ್ಳಿ ನಿವಾಸಿ ಎಂ.ಮಧು. ಯುವತಿಯರನ್ನು ಪರಿಚಯ ಮಾಡಿಕೊಂಡ ನಂತರ ಮೊದಲು ನಿಮಗೆ ಸರ್ಕಾರಿ ನೌಕರಿ ಕೊಡಿಸುತ್ತೇನೆ. ಆನಂತರ ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ. ದಾವಣಗೆರೆ ಮೂಲದ ಯುವತಿಯೊಬ್ಬಳಿಗೆ ಮೈಸೂರು ರೇಲ್ವೆ ವರ್ಕ್ ಶಾಪ್ ನಲ್ಲಿ ಕೆಲಸ ಕೊಡಿಸುವುದಾಗಿ 21 ಲಕ್ಷ ರೂ. ಪಡೆದು ವಂಚಿಸಿದ್ದ. ಹೀಗೆ ಹಲವು ಯುವತಿಯರಿಗೆ ಈತ ಮದುವೆಯಾಗುವುದಾಗಿ ಪರಿಚಯವಾಗಿ ಮೊದಲು ಕೆಲಸ ಕೊಡಿಸುತ್ತೇನೆಂದು ವಂಚಿಸಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.