ಮಂಗಳೂರು : ಫಾರಿನ್‌ನಲ್ಲಿ ಕೆಲಸ ಕೊಡಿಸೋದಾಗಿ ಹಲವರಿಗೆ ನಂಬಿಸಿ ಕೋಟಿ ಕೋಟಿ ಹಣ ಪಡೆದ ಬಳಿಕ ಉದ್ಯೋಗವನ್ನು ಕೊಡಿಸದೇ ಮೋಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರದ ಆಲ್ಟನ್ ರೆಬೇರೋ (42) ಮತ್ತು ಬೆಂಗಳೂರಿನ ಆನೇಕಲ್ನ ಪ್ರಕೃತಿಯು (34) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ವಶಪಡಿಸಿಕೊಂಡಿದ್ದಾರೆ.
ಕಾವೂರು ಠಾಣಾ ವ್ಯಾಪ್ತಿಯ ಹಲವರಿಗೆ ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ನಂಬಿಸಿದ್ದರು. ಸುಮಾರು 1 ಕೋಟಿ ರೂ. ಹಣವನ್ನು ಪಡೆದುಕೊಂಡು ಉದ್ಯೋಗವನ್ನು ಕೊಡಿಸದೇ ನಂಬಿಸಿ, ಮೋಸ ಮಾಡಿದ್ದಾರೆ ಎಂದು ಆರೋಪಿಸಿ, ಈ ಕಠಿಣ ಕ್ರಮ ಕೈಗೊಳ್ಳುವಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನಂತೆ ಆರೋಪಿಗಳನ್ನು ಬಂಧಿಸಲಾಗಿದೆ
ಇದನ್ನೂ ಓದಿ : ನ.2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ RSSಗೆ ಹಿನ್ನಡೆ | ಇನ್ನೊಂದು ಶಾಂತಿ ಸಭೆಗೆ ಹೈಕೋರ್ಟ್ ಸೂಚನೆ!



















