ಬೆಂಗಳೂರು: ಫ್ರಿಡ್ಜ್ ನಲ್ಲಿ (Refrigerator) ಬೆಂಕಿ (Fire) ಕಾಣಿಸಿಕೊಂಡ ಪರಿಣಾಮ ಇಡೀ ಮನೆ ಸುಟ್ಟು ಕರಕಲಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಬೆಂಗಳೂರಿನ ವೈಟ್ ಫೀಲ್ಡ್ (White-Field) ಕಾಡುಗೋಡಿ (Kadugodi) ಮುಖ್ಯರಸ್ತೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿಟ್ಟಿದ್ದ ಫ್ರಿಡ್ಜ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಕಿ ಇಡೀ ಮನೆಗೆ ಕ್ಷಣ ಮಾತ್ರದಲ್ಲಿ ವ್ಯಾಪಿಸಿದೆ. ಪರಿಣಾಮ ಮನೆಯೇ ಸುಟ್ಟು ಕರಕಲಾಗಿದೆ.
ಮನೆಯ ವಸ್ತುಗಳು ಸುಟ್ಟು ಕರಕಲು
ಮನೆಯಲ್ಲಿಟ್ಟಿದ್ದ ಶೇ. 80ರಷ್ಟು ವಸ್ತುಗಳು ಸುಟ್ಟು ಕರಕಲಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮನೆಯಲ್ಲಿ ಮೂವರು ವಾಸಿಸುತ್ತಿದ್ದರು. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.