ಚಾಮರಾಜನಗರ : ಎಣ್ಣೆ ಪಾರ್ಟಿ ನೆಪದಲ್ಲಿ ಕರೆದು ಸ್ನೇಹಿತನನ್ನೇ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ರಾಮಕೃಷ್ಣ ಮೃತ ವ್ಯಕ್ತಿಯಾಗಿದ್ದು, ಮಲ್ಲಿಕಾರ್ಜುನ ಎಂಬ ಸ್ನೇಹಿತನೇ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ.
ಎಣ್ಣೆ ಪಾರ್ಟಿ ಮಾಡೋಣ ಎಂದು ರಾತ್ರಿ ಜಮೀನಿಗೆ ಕರೆದುಕೊಂಡು ಹೋಗಿದ್ದ ಮಲ್ಲಿಕಾರ್ಜುನ, ಇಬ್ಬರೂ ಮದ್ಯಪಾನ ಮಾಡಿದ ಬಳಿಕ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮವಾಗಿ ರಾಮಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪದೇಪದೇ ರೇಗಿಸುತ್ತಿದ್ದ ಕಾರಣದಿಂದ ಮಲ್ಲಿಕಾರ್ಜುನ ಕೋಪಗೊಂಡು ಈ ಕೃತ್ಯ ಎಸಗಿದ್ದಾಗಿ ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ಮಾಂಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೈಕ್‌ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು!



















