ಧಾರವಾಡ: ಇಬ್ಬರು ಯುವಕರು ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಈ ಘಟನೆ ಧಾರವಾಡಾ ತಾಲೂಕಿನ ಮನಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸ್ನೇಹಿತರಾದ ಸತೀಶ್(16), ಉಮೇಶ್(16) ಸಾವನ್ನಪ್ಪಿರುವ ದುರ್ದೈವಿಗಳು (death). ಇಬ್ಬರು ರಜೆ ಇರುವ ಹಿನ್ನೆಲೆಯಲ್ಲಿ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದಾರೆ. ಓರ್ವನ ಮೃತದೇಹ ಪತ್ತೆ ಆಗಿದ್ದು, ಇನ್ನೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.