ಬೆಂಗಳೂರು: ಕರ್ನಾಟಕ ಸರ್ಕಾರದ ವತಿಯಿಂದ ಆಯೋಜಿಸುವ ಅಧಿಕೃತ ಸಭೆ/ ಸಮಾರಂಭಗಳಲ್ಲಿ ಇನ್ಮುಂದೆ ಹಾರ, ತುರಾಯಿ, ನೆನಪಿನ ಕಾಣಿಕೆ, ಹೂಗುಚ್ಛ, ಹಣ್ಣಿನ ಬುಟ್ಟಿ, ಶಾಲು ಇತ್ಯಾದಿ ಕಾಣಿಕೆಗಳನ್ನು ನಿಷೇದಿಸಿ ನಗರಾಭಿವೃದ್ಧಿ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ ತುರಾಯಿ, ಹಣ್ಣಿನ ಬುಟ್ಟಿ ಶಾಲು, ನೆನಪಿನ ಕಾಣಿಕೆ ಮತ್ತು ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
ಅದರಂತೆ, ನಗರಾಭಿವೃದ್ಧಿ ಇಲಾಖೆ ಮತ್ತು ಸಂಬಂಧಿತ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭ ಹಾಗೂ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ಶಾಲು, ನೆನಪಿನ ಕಾಣಿಕೆ ಮತ್ತು ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಹಾಗೂ ಅದರ ಬದಲಾಗಿ ಕನ್ನಡ ಪುಸ್ತಕಗಳು ಅಥವಾ ಸಸಿಗಳನ್ನು ನೀಡಬಹುದೆಂದು ಮಹತ್ವದ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು | ಇಂದಿನಿಂದ 4 ದಿನ ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳದ ಸಂಭ್ರಮ



















