ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ದೇವಸ್ಥಾನಗಳ ತವರೂರು. ಅಂತಹ ದೇವಸ್ಥಾನಗಳ ಊರಿನಲ್ಲಿರುವ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಅನಂತಪದ್ಮನಾಭ ದೇವಸ್ಥಾನದ ನಗಾರಿ ಗೋಪುರ ನಿರ್ಮಾಣಕ್ಕೆ ಮುಜರಾಯಿ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲು ಪ್ರಯತ್ನಿಸುತ್ತೇನೆ ಎಂದು ಮುಜರಾಯಿ ಹಾಗೂ ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಅವರು ಜು.13ರಂದು ದೇವಸ್ಥಾನದ ಮೊದಲ ಹಂತದ ಜೀರ್ಣೋದ್ಧಾರದ ಪ್ರಯುಕ್ತ ನಿರ್ಮಾಣಗೊಳ್ಳಲಿರುವ ನಗಾರಿ ಗೋಪುರಕ್ಕೆ ಶಿಲಾನ್ಯಾಸ ನೆರವೇರಿಸಿ ಬಳಿಕ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ವೇಳೆ ದೇಗುಲದ ವ್ಯವಸ್ಥಾಪನ ಸಮಿತಿ ನೀಡಿದ ಮನವಿಯನ್ನು ಸಚಿವರು ಸ್ವೀಕರಿದರು.



















