ರಾಜ್ಯದಲ್ಲಿ ಭಾನುವಾರ ಕೆಪಿಎಸ್ಸಿ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಡಿಸಿ ಮೊಹಮ್ಮದ್ ರೋಷನ್ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ನಗರದ 34 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 12,244 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಬಳಿ 250ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಕ್ರಮ ತಡೆಯಲು ಹಲವು ಕಾವಲು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮಂಗಳಸೂತ್ರ ಹಾಗೂ ಜನಿವಾರಕ್ಕೆ ವಿನಾಯಿತಿ ನೀಡಲಾಗಿದೆ. ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಡಬಲ್ ವೀಕ್ಷಕರನ್ನು ನೇಮಿಸಲಾಗಿದೆ. ಓಎಂಆರ್ ಶೀಟ್ ಮೂರು ಪ್ರತಿಗಳಲ್ಲಿ ಇರಲಿದ್ದು, ಪರೀಕ್ಷೆ ಮುಗಿದ 4 ಗಂಟೆಯೊಳಗೆ ಸ್ಕ್ಯಾನ್ ಮಾಡಲಾಗುತ್ತದೆ. ಒಂದು ಪ್ರತಿ ಜಿಲ್ಲಾಧಿಕಾರಿ ಸುಪರ್ದಿಯಲ್ಲಿರಲಿದೆ, ಮತ್ತೊಂದು ಪ್ರತಿ ಕೆಪಿಎಸ್‌ಸಿಗೆ ರವಾನೆಯಾಗಲಿದೆ.


















