ಬೆಂಗಳೂರು: ಗ್ಯಾರಂಟಿ (Guarantee Scheme) ಯೋಜನೆಯ ಹಣ ಬಿಡುಗಡೆ ಆಗದಿರುವ ಕುರಿತು ಮಾಹಿತಿ ಇಲ್ಲ. ಆದರೆ ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 5 ತಿಂಗಳಿನಿಂದ ಅನ್ನಭಾಗ್ಯದ ಹಣ ಹಾಗೂ ಕಳೆದ 3 ತಿಂಗಳಿಂದ ಗೃಹಲಕ್ಷ್ಮಿ ಹಣ ಬಾರದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಹಣ ಪಾವತಿ ಮಾಡದೇ ಹೋದರೇ ಪಾವತಿ ಮಾಡುತ್ತೇವೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಹಣ ಬಿಡುಗಡೆ ಪೆಂಡಿಂಗ್ ಇರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಕೂಡಲೇ ಹಣ ಬಿಡುಗಡೆ ಮಾಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.