ನಟಿ ಅಮೂಲ್ಯ (Amulya) ಸಹೋದರ ದೀಪಕ್ ಅರಸ್ (Deepak Aras) ಅನಾರೋಗ್ಯದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದು, ಇಂದು ಅಂತ್ಯಕ್ರಿಯೆ ನಡೆದಿದೆ.
ಅಂತ್ಯಕ್ರಿಯೆಯ ವಿಧಿ ವಿಧಾನಗಳು ಶುಕ್ರವಾರ ಸಂಜೆ ಬೆಂಗಳೂರಿನ ಸುಮ್ಮನಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.
ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ಇಂದು (ಅ.18) ಬೆಳಗ್ಗೆ 6:04ಕ್ಕೆ ನಿಧನರಾಗಿದ್ದರು. ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ. ಅವರು ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ.
ದೀಪಕ್ ಅರಸ್ ಅವರು ರಾಕೇಶ್ ಅಡಿಗ ಮತ್ತು ಅಮೂಲ್ಯ ನಟಿಸಿದ್ದ ‘ಮನಸಾಲಜಿ’ ಮತ್ತು ಡಾರ್ಲಿಂಗ್ ಕೃಷ್ಣ ನಟಿಸಿದ್ದ ‘ಶುಗರ್ ಫ್ಯಾಕ್ಟರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು.