ಚಿಕ್ಕಬಳ್ಳಾಪುರ: ಮಲಗಿದ್ದಲ್ಲೇ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಇಂಡೋ ಟೆಬೆಟಿಯನ್ ಬಾರ್ಡರ್ ಪೊಲೀಸ್ ಪೋರ್ಸ್‍ನಲ್ಲಿ (ITBP) ಸೇವೆ ಸಲ್ಲಿಸುತ್ತಿದ್ದ ಯೋಧ ಹೃದಯಾಘಾತಕ್ಕೆ (Heart Attack) ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಿತು.
ಗಂಗಾಧರಪ್ಪ ಮೃತ ಯೋಧ. ಯೋಧನ (Soldier) ಹುಟ್ಟೂರು ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದಲ್ಲಿ ಸೇನಾ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಐಟಿಬಿಪಿಯ ಗಾಂಗ್ಟೋಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಗಂಗಾಧರಪ್ಪ ಕರ್ತವ್ಯ ಮುಗಿಸಿ ಮಲಗಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾಗಿದ್ದರು. ಈ ಕ ರಿತು ಸೇನಾ ಅಧಿಕಾರಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಬೆಳಗ್ಗೆ ಮನೆಯವರಿಗೆ ಸಾವಿನ ಸುದ್ದಿ ತಿಳಿದು ಎಲ್ಲರೂ ಆಘಾತಕ್ಕೊಳಗಾಗಿದ್ದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.