ಬೆಂಗಳೂರು : ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಇತಿಹಾಸ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆ ತನ್ನ ವಶಕ್ಕೆ ಪಡೆದಿದೆ. ಈ ಸಂಬಂಧ ಆದೇಶ ಹೊರಡಿಸಿದೆ.
ಬೆಂಗಳೂರು ನಗರದ ಪ್ರಸಿದ್ಧ ದೇವಾಲಯಗಳಲ್ಲಿ ಗಾಳಿ ಆಂಜನೇಯ ದೇವಾಲಯವೂ ಒಂದು. ಕೆಲವು ವರ್ಷಗಳಿಂದ ವಿವಾದದ ಸುಳಿಗೆ ಸಿಲುಕಿತ್ತು. ಇದೀಗ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದಿದೆ.
ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ದೇವಸ್ಥಾನದಲ್ಲಿ ಆಡಳಿತ ನಿರ್ವಹಣೆ ಸರಿಯಾಗಿಲ್ಲ ಎಂಬುವುದನ್ನು ಸೂಚಿಸಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.



















