ಕಲಬುರಗಿ: ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿ ಜೂಜಾಟವಾಡಿದ್ದ ವಿಡಿಯೋವೊಂದು ವೈರಲ್ ಆಗಿತ್ತು. ಈ ಕುರಿತು ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಪ್ರಸಾರ ಮಾಡಿತ್ತು. ಪರಿಣಾಮ ಈಗ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ (Wadi Police Station) ಪೊಲೀಸರು ಜೂಜಾಟ ಆಡಿದ್ದರು. ಜೂಜಾಟದಲ್ಲಿ ತೊಡಗಿದ್ದ ಎಎಸ್ ಐ ಮಹಿಮೂದ್ ಮಿಯಾ, ಹೆಡ್ ಕಾನ್ಸ್ ಟೇಬಲ್ ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್ ನಾಗಭೂಷಣ್ ಅವರನ್ನು ಅಮಾನತುಗೊಳಿಸಿ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ.
ಜೊತೆಗೆ ವಾಡಿ ಠಾಣೆಯ ಪಿಎಸ್‌ಐ ತಿರುಮಲೇಶ್ ಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.