ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಸರ್ಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ (GAMCB Recruitment 2025) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಂಟು ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸರ್ಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು
ಒಟ್ಟು ಹುದ್ದೆಗಳು: 08
ಹುದ್ದೆಗಳ ಹೆಸರು: ಪ್ರೊಫೆಸರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 30
ಎರಡು ಕನ್ಸಲ್ಟಂಟ್ ಅಸಿಸ್ಟಂಟ್ ಪ್ರೊಫೆಸರ್, ಐದು ಕನ್ಸಲ್ಟಂಟ್ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಒಂದು ಕನ್ಸಲ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿಎಎಂಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 45 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ gamcb.com ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Principal, Government Ayurveda Medical College, Dhanvantari Road, Bengaluru-560009
ಇದನ್ನೂ ಓದಿ : ರಾಜ್ಯ ಸರ್ಕಾರದ KSRLPS 23 ಬ್ಲಾಕ್ ಮ್ಯಾನೇಜರ್ ಹುದ್ದೆಗಳು ಖಾಲಿ : ಹೀಗೆ ಅರ್ಜಿ ಸಲ್ಲಿಸಿ



















