ಬೆಳಗಾವಿ: ಕಾಂಗ್ರೆಸ್ ಮಹಾ ಅಧಿವೇಶನದ ಅಧ್ಯಕ್ಷತೆಯನ್ನು ಮಹತ್ಮಾ ಗಾಂಧಿ ವಹಿಸಿಕೊಂಡು ಶತಮಾನ ಕಂಡ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸಮಾವೇಶ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ತಾಲೂಕಿನ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ನೀಡಲಾಗಿದೆ.
ಡಿ. 26 ಮತ್ತು 27ರಂದು ಎರಡು ದಿನಗಳ ಕಾಲ ರಜೆ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರ ಸಂಜೆ ಪೀರನವಾಡಿಯಲ್ಲಿರುವ ಗಾಂಧಿ ಭವನದಲ್ಲಿ ಎಐಸಿಸಿ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಗುರುವಾರ ಸುವರ್ಣ ಸೌಧದಲ್ಲಿ ಗಾಂಧಿ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ನಾಯಕರೇ ದಂಡೇ ಕಾರ್ಯಕ್ರಮಕ್ಕೆ ಆಗಮಿಸುತ್ತಿದೆ.