ಬೆಳಗಾವಿ : ಗಾಂಧಿ ಭಾರತ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು, ಸುವರ್ಣಸೌಧದ(Suvarna Soudha) ಮುಂದೆ ಗಾಂಧಿ ಪ್ರತಿಮೆ (Gandhi statue) ಅನಾವರಣಗೊಳಿಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,(Mallikarjuna Kharge) ಸಂಸದೆ ಪ್ರಿಯಾಂಕ ಗಾಂಧಿ(Priyanka Gandhi) ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ಸಮಾವೇಶಕ್ಕೆ ರಾಹುಲ್ ಗಾಂಧಿ ಗೈರಾಗಿದ್ದಾರೆ.
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗೂ ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದು ಈ ವೇಳೆ ಸಿಎಂ ಹೇಳಿದ್ದಾರೆ.
ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್(ST. Somashekhar) ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಮೂಲಕ ಅಚ್ಚರಿ ಮೂಡಿಸಿದ್ದಾರೆ.