ಮುಂಬಯಿ: ಮಹಾರಾಷ್ಟ್ರ (Maharashtra) ರಾಜ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಹಲವೆಡೆ ಅವಾಂತರಗಳು ನಡೆದಿವೆ. ಗಣೇಶ ಮೂರ್ತಿ (Ganesh Idol Immersion) ವಿಸರ್ಜನೆ ಸಂದರ್ಭದಲ್ಲಿ ನಾಲ್ವರು ಸಾವನ್ನಪ್ಪಿದ್ದು, 13 ಜನ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.
ಪುಣೆ ಜಿಲ್ಲೆಯ ಚಕನ್ ಎಂಬ ಪ್ರದೇಶದಲ್ಲಿ ನಾಲ್ವರು ಕೊಚ್ಚಿ ಹೋಗಿದ್ದಾರೆ. ಆದರೆ, ರಾಜ್ಯದ ಬೇರೆ ಬೇರೆಡೆ ಹಲವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆದಿದೆ. ಮಹಾರಾಷ್ಟ್ರ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು, ನದಿಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆಗೆ ಹೋದ ಕೆಲವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಕಾರ್ಯಾಚರಣೆ ನಡೆಸಿವೆ.