ಬೆಳಗಾವಿ: ಜಿಲ್ಲೆಯಲ್ಲಿ ಗ್ಯಾಂಗ್ ರೇಪ್ ನಡೆದಿರುವ ಅಮಾನವೀಯ ಘಟನೆಯೊಂದು ವರದಿಯಾಗಿದೆ. 6 ಜನರ ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಕುರಿತು ವರದಿಯಾಗಿದೆ.
ಅಪ್ರಾಪ್ತ ಬಾಲಕಿ ಮೇಲೆ 6 ಜನರ ಗ್ಯಾಂಗ್ ಎರಡೆರಡು ಬಾರಿ ಅತ್ಯಾಚಾರ ನಡೆಸಿದೆ. ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಎ1 ಸೇರಿ ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಸ್ನೇಹಿತನೇ ಬಾಲಕಿಯನ್ನು ಗುಡಕ್ಕೆ ಕರೆದುಕೊಂಡು ಹೋಗಿ 6 ಜನರೊಂದಿಗೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಆನಂತರ ಅದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ನಡೆಸಿದ್ದಾರೆ. ಈಗ ಮತ್ತೆ ಅದೇ ವಿಡಿಯೋ ಇಟ್ಟುಕೊಂಡು ಬಾಲಕಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.