ಹಾಸನ : ಬುದ್ಧಿಮಾಂದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯನ್ನು ಖಂಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನೆಯ ಮೂಲಕ ಆಗ್ರಹಿಸಲಾಗಿದೆ.
ಹಾಸನದ ಹೇಮಾವತಿ ಪ್ರತಿಮೆ ಬಳಿಯಿಂದ ಎನ್.ಆರ್ ವೃತ್ತ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿ ಎನ್.ಆರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು, ಮುಸ್ಲಿಂ ಸಮುದಾಯದ ಸಾವಿರಾರು ಜನ ಭಾಗಿಯಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.