ಗಂಗೊಳ್ಳಿ ದೋಣಿ ದುರಂತದಲ್ಲಿ ಮಡಿದ ಮೀನುಗಾರರಿಗೆ ಸಚಿವ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೋಣಿ ದುರಂತದಲ್ಲಿ ಮೃತಪಟ್ಟ ಕುಟುಂಬದವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ. ಸಾವನ್ನಪ್ಪಿದವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರವು ಮೀನುಗಾರರ ಸಂಕಷ್ಟ ಸಮಯದಲ್ಲಿ ತ್ವರಿತವಾಗಿ ಸ್ಪಂದಿಸುವ ಕೆಲಸ ಮಾಡಿದೆ ಎಂದಿದ್ದಾರೆ.


















