ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರ ಕಂಚಿನ ಬಾಗಿಲು ಬಳಿ ನಡೆದಿದೆ.
ಈ ಅಪಘಾತದಲ್ಲಿ ಚಾಲಕ ಅರುಣ್ ಶೇಖ್ (57) ಗೆ ಗಂಭೀರ ಗಾಯವಾಗಿದ್ದು, ಆತನನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್‌ನಿಂದ ಉಡುಪಿ ಕಡೆಗೆ ಹೋಗುತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಟ್ಯಾಂಕರ್‌ನಲ್ಲಿ ಎಥೆನಾಲ್ ಸೋರಿಕೆಯಾಗಿದೆ. ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 52ರ ಸಂಚಾರ ಬಂದ್ ಮಾಡಲಾಗಿದ್ದು, ಅಂಕೋಲದಿಂದ ಮಾದನಗೇರಿ ಹೆದ್ದಾರಿ ಮೂಲಕ ಮಾರ್ಗ ಬದಲು ಮಾಡಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್ ತಂಡ ದೌಡಾಯಿಸಿದ್ದು, ಗ್ಯಾಸ್ ಸೋರಿಕೆಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಈ ಘಟನಾ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಗದಗದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ | ಒಬ್ಬ ರೈತ ಅಸ್ವಸ್ಥ



















