ದಾವಣಗೆರೆ : ಬೆಣ್ಣೆ ನಗರಿಯಲ್ಲಿ ಕಮರ್ಷಿಯಲ್ ಗ್ಯಾಸ್ ಕೊರತೆ ತೀವ್ರವಾಗಿದ್ದು, ಬೀದಿ ಬದಿ ತಿಂಡಿ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಮರ್ಷಿಯಲ್ ಗ್ಯಾಸ್ ಸಿಗದೇ ಹಲವಾರು ಬೀದಿ ಬದಿ ತಿಂಡಿ ಅಂಗಡಿಗಳು ಬಂದ್ ಆಗಿರುವ ದೃಶ್ಯ ನಗರದಲ್ಲಿ ಕಂಡು ಬಂದಿದೆ.
ಗ್ಯಾಸ್ ಸಿಲಿಂಡರ್ ಸಿಗದ ಹಿನ್ನೆಲೆ ಕೆಲ ವ್ಯಾಪಾರಿಗಳು ಅಂಗಡಿಗಳಿಗೆ ರಜೆ ಹಾಕಿ ಮನೆಯಲ್ಲೇ ಕುಳಿತಿದ್ದಾರೆ. ಸುಮಾರು 60% ಬೀದಿ ಬದಿ ತಿಂಡಿ ವ್ಯಾಪಾರಿಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ಕೆಲವು ಟೀ ಅಂಗಡಿಗಳು ಗ್ಯಾಸ್ ಬದಲು ಇಂಡಕ್ಷನ್ ಸ್ಟೋವ್ ಬಳಸುವ ಪರಿಸ್ಥಿತಿ ಎದುರಾಗಿದೆ. ಹೋಟೆಲ್‌ಗಳಲ್ಲಿ ಇಡ್ಲಿ ಸೇರಿದಂತೆ ತಿಂಡಿ ತಯಾರಿಸಲು ಸಹ ವಿದ್ಯುತ್ ಒಲೆಗಳನ್ನು ಬಳಸುತ್ತಿರುವುದು ಕಂಡು ಬಂದಿದೆ.
ನಗರದ ಹಲವು ಪ್ರದೇಶಗಳಲ್ಲಿ ಫುಡ್ ಸ್ಟ್ರೀಟ್‌ಗಳಂತೆ ಕಿಕ್ಕಿರಿದಿದ್ದ ರಸ್ತೆಗಳು ಈಗ ಖಾಲಿ ಖಾಲಿಯಾಗಿ ಕಾಣಿಸುತ್ತಿವೆ. ಒಟ್ಟಿನಲ್ಲಿ ಗ್ಯಾಸ್ ಕೊರತೆಯಿಂದ ಕೆಲ ಬೀದಿ ಬದಿ ವ್ಯಾಪಾರಿಗಳಿಗೆ ಬದುಕು ನಡೆಸುವುದು ಕಷ್ಟಕರವಾಗಿದೆ.
ಇದನ್ನೂ ಓದಿ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ


















