ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ದಾಸೋಹಕ್ಕೆ ತೊಂದರೆ ಎಂದು ವದಂತಿ ಹರಿದಾಡುತ್ತಿದೆ. ಈ ಬಗ್ಗೆ ಮಾತನಾಡಿದ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು, ಯುಗಾದಿ ಜಾತ್ರೆ ಸೇರಿದಂತೆ ದಿನನಿತ್ಯದ ಅಗತ್ಯಕ್ಕೆ ಬೇಕಾದ ಸಿಲಿಂಡರ್‌ಗಳನ್ನು ಈಗಾಗಲೇ ಸ್ಟಾಕ್ ಮಾಡಿದ್ದೇವೆ. ಹಾಗಾಗಿ ದಾಸೋಹಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಲೆ ಮಹದೇಶ್ವರ ಸನ್ನಿಧಿಯಲ್ಲಿ ದಾಸೋಹಕ್ಕೆ ಗ್ಯಾಸ್ ಸಮಸ್ಯೆ ಎದುರಾಗಿದೆ ಎಂದು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ವದಂತಿಗೆ ಕಿವಿಗೊಡಬೇಡಿ. ಮಹದೇಶ್ವರ ಬೆಟ್ಟದಲ್ಲಿ ಲಾಡು ಪ್ರಸಾದ, ದಾಸೋಹ ಹಾಗೂ ದರ್ಶನ ವ್ಯವಸ್ಥೆ ಯಾವುದಕ್ಕೂ ಕೂಡ ತೊಂದರೆ ಇಲ್ಲ. ಜಿಲ್ಲಾಡಳಿತ ಅಗತ್ಯ ವ್ಯವಸ್ಥೆ ಮಾಡಿಕೊಟ್ಟಿದೆ. ಅಗತ್ಯವಾದ ಕೂಡ ಗ್ಯಾಸ್ ಸಿಲಿಂಡರ್‌ಗಳು ಸ್ಟಾಕ್ ಇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್



















