ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ರಚನೆಯಾಗಿ ರುವ ಐದು ನಗರ ಪಾಲಿಕೆಗೆ ನಿಯೋಜನೆಗೊಂಡ ಆಯುಕ್ತರು ಆಯಾ ನಗರ ಪಾಲಿಕೆ ಕಚೇರಿಗಳಲ್ಲಿ ಅಧಿಕಾರ ಸ್ವೀಕಾರ ಮಾಡಿದರು.
ಬುಧವಾರ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್, ಬೆಂಗಳೂರು ದಕ್ಷಿಣ ನಗರಪಾಲಿಕೆಯ ಆಯುಕ್ತರಾಗಿ ಕೆ.ಎನ್. ರಮೇಶ್, ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮುಲ ಸುನೀಲ್ ಕುಮಾರ್, ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ.ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಜತೆಗೆ, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು ಸೇರಿದಂತೆ ಹಲ ವರು ಅಧಿಕಾರ ಸ್ವೀಕಾರ ಮಾಡಿಕೊಂಡಿದ್ದಾರೆ.