ಬೆಂಗಳೂರು : ಬೃಹತ್ ಮೊತ್ತದ ಸೇವಾ ತೆರಿಗೆ ಬಾಕಿ ಉಳಿಸಿಕೊಂಡಿರುವ ನಗರದ ಸರ್ಕಾರಿ ಕಟ್ಟಡಗಳಿಗೆ ಸಂಬಂಧಿಸಿದ ಇಲಾಖೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಅವರು ನೀಡಿದ ದೂರಿನ ಬೆನ್ನಲ್ಲೇ ಎಚ್ಚೆತ್ತ GBA ಕಂದಾಯ ಇಲಾಖೆಯ ವಿಶೇಷ ಆಯುಕ್ತರು, ಸೇವಾ ತೆರಿಗೆ ವಸೂಲಿ ಮಾಡದ ಅಧಿಕಾರಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳುವಂತೆ 5 ನಗರ ಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಸಣ್ಣ ಮೊತ್ತದ ಆಸ್ತಿ ತೆರಿಗೆ ಪಾವತಿಸದ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಜನರ ಆಸ್ತಿಗಳನ್ನು ಹರಾಜು ಹಾಕುವುದಕ್ಕೂ ಮೊದಲು 550 ಕೋಟಿಗಳಷ್ಟು ಬೃಹತ್ ಮೊತ್ತದ ಸೇವಾ ತೆರಿಗೆಗಳನ್ನು ಬಾಕಿ ಉಳಿಸಿಕೊಂಡಿರುವ ವಿಧಾನಸೌಧ, ವಿಕಾಸಸೌಧ, ರಾಜಭವನ, ಕುಮಾರಕೃಪಾ ಅತಿಥಿ ಗೃಹ ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳ ವಿರುದ್ಧ ಕ್ರಮ ತೆಗೆದುಕೊಂಡು ಒಂದು ದಿನದ ಮಟ್ಟಿಗಾದರೂ ಬೀಗ ಜಡಿಯುವ ಕೆಲಸವನ್ನು ಮಾಡಿ ಎಂದು ದಾಖಲೆಗಳ ಸಮೇತ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ದೂರು ನೀಡಿದ್ದರು.

ಈ ದೂರಿನ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ಇಲಾಖೆಯ ವಿಶೇಷ ಆಯುಕ್ತರು 5 ನಗರ ಪಾಲಿಕೆಗಳ ಆಯುಕ್ತರಿಗೆ ಸುತ್ತೋಲೆಯನ್ನು ಹೊರಡಿಸಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ಹಾಗೂ ಸೇವಾ ತೆರಿಗೆ ವಸೂಲಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆದೇಶಿಸಿದ್ದಾರೆ.

ಇದನ್ನೂ ಓದಿ : ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!



















