ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗುಲ್ಬರ್ಗ ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್ (GESCOM Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 275 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 275 ಅಪ್ರೆಂಟಿಸ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಗುಲ್ಬರ್ಗ ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್ (GESCOM)
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆ: 275
ಉದ್ಯೋಗ ಸ್ಥಳ: ಕಲಬುರಗಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 5
175 ಗ್ರಾಜ್ಯುಯೇಟ್ ಅಪ್ರೆಂಟಿಸ್ ಹಾಗೂ 100 ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 18 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 9 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ gescom.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಮಾಹಿತಿ ನೀಡಲಾಗಿದೆ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಹಾಪ್ರಬಂಧಕರು (ಆಡಳಿತ ಮತ್ತು ಮಾನವ ಸಂಪನ್ಮೂಲ),
ನಿಗಮ ಕಚೇರಿ, ಜೆಸ್ಕಾಂ (GESCOM),
ಸ್ಟೇಷನ್ ರೋಡ್, ಕಲಬುರಗಿ – 585102.
ಇದನ್ನೂ ಓದಿ : ಎಥೆನಾಲ್ ಉತ್ಪಾದನೆಯಲ್ಲಿ ಭಾರತದ ಮೈಲಿಗಲ್ಲು : ಬೇಡಿಕೆಗಿಂತ ಪೂರೈಕೆ ಅಧಿಕ!



















