ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

February 10, 2026
Share on WhatsappShare on FacebookShare on Twitter

ಬೆಂಗಳೂರು | ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ ನಾಯಕನಾಗಿ ನಟಿಸಿರುವ, ವಿಜಯಾನಂದ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ `ಸೂಪರ್ ಹಿಟ್’. ತನ್ನ ಆಂತರ್ಯದ ಕಸುವಿನ ಸುಳಿವಿನಿಂದಲೇ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟು ಹಾಕಿದ್ದ ಈ ಸಿನಿಮಾಕ್ಕೀಗ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ಜನಪ್ರಿಯತೆಯೂ ಕೂಡಾ ಮತ್ತಷ್ಟು ಶಕ್ತಿ ತುಂಬಿದೆ. ಇದೇ ಹಂತದಲ್ಲಿ ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ, ಟೀಸರ್ ಒಂದರ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ಈ ವೇದಿಕೆಯಲ್ಲಿ ನಿರ್ದೇಶಕ ವಿಜಯಾನಂದ್, ನಿರ್ಮಾಪಕ ಜಿ ಉಮೇಶ್, ಸಾಧು ಕೋಕಿಲಾ, ಗೀತರಚನೆಕಾರ ಡಾ.ವಿ.ನಾಗೇಂದ್ರ ಪ್ರಸಾದ್, ಗೌರವ್ ಶೆಟ್ಟಿ, ಶ್ವೇತಾ ಮುಂತಾದವರು ಸಿನಿಮಾ ಬಗ್ಗೆ ಭರವಸೆಯ ಮಾತಾಡುತ್ತಲೇ, ಒಂದಷ್ಟು ಮಹತ್ವದ ಅಂಶಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆಗಾಣಲಿದೆ.

ವಿ. ನಾಗೇಂದ್ರ ಪ್ರಸಾದ್ ಸಹೋದರರಾದ ವಿಜಯಾನಂದ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸೂಪರ್ ಹಿಟ್ ಬಿಡುಗಡೆ ದಿನಾಂಕ ಜಾಹೀರು ಮಾಡಿ ಮಾತಾಡಿದ ಅವರು, ಕಥೆ ಸಿದ್ಧವಾದ ಬಗೆಯಿಂದ ಮೊದಲ್ಗೊಂಡು ಈವರೆಗಿನ ಮಧುರ ಸ್ಮೃತಿಯನ್ನು ಮೆಲುಕು ಹಾಕಿದ್ದಾರೆ. ಕಥೆ ಬರೆಯಲು ಶುರು ಮಾಡಿದಾಗಿನಿಂದ ಈ ವರೆಗೂ ಎಲ್ಲವೂ ಹೂವೆತ್ತಿಟ್ಟಷ್ಟೇ ಸಲೀಸಾಗಿ ನಡೆಯುತ್ತಾ ಬಂದಿದೆ ಎಂಬ ಧನ್ಯತಾ ಭಾವ ವ್ಯಕ್ತಪಡಿಸಿರುವ ವಿಜಯಾನಂದ್, ಯಾವುದಕ್ಕೂ ಕೊರತೆಯಾಗದಂತೆ ಒಂದಿಡೀ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಜಿ ಉಮೇಶ್ ಅವರ ಸಿನಿಮಾ ಪ್ರೇಮವನ್ನು ಕೊಂಡಾಡಿದ್ದಾರೆ. ತನ್ನ ಸಿನಿಮಾ ಮೂಡಿ ಬಂದಿರುವ ರೀತಿ ಮತ್ತು ಅದರ ಕಂಟೆಂಟಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಸದರಿ ಚಿತ್ರ ಸೂಪರ್ ಹಿಟ್ಟಾಗೋದು ಗ್ಯಾರೆಂಟಿ ಎಂಬ ಭರವಸೆ ವ್ಯಕ್ತಪಡಿಸಿದರು. ನೂರು ದಿನಗಳ ಕಾಲ ಯಶಸ್ವೀ ಪ್ರದರ್ಶನ ನೀಡಲು ಅನುವು ಮಾಡಿಕೊಡುವಂತೆ ಪ್ರೇಕ್ಷಕ ಪ್ರಭುಗಳಲ್ಲಿ ವಿನಂತಿಸಿಕೊಂಡರು.

ಇದೇ ವೇದಿಕೆಯಲ್ಲಿ ಮತ್ತೊಂದು ಖುಷಿಯ ಸಂಗತಿಯನ್ನೂ ವಿಜಯಾನಂದ್ ಹಂಚಿಕೊಂಡರು. ಸೂಪರ್ ಹಿಟ್ ಚಿತ್ರದ ಓಟಿಟಿ ಹಕ್ಕು ಗಳನ್ನು ಹೊಸಾ ಸಂಸ್ಥೆಯೊಂದು ದೊಡ್ದ ಮೊತ್ತಕ್ಕೆ ಖರೀದಿಸಿರುವುದಾಗಿ ಮಾಹಿತಿ ನೀಡಿದರು. ಈ ಸಿನಿಮಾವನ್ನು ಪ್ರೀತಿಯಿಂದ ನಿರ್ಮಾಣ ಮಾಡಿರುವ ಜಿ ಉಮೇಶ್ ಚುಟುಕಾದ ಮಾತುಗಳಲ್ಲಿಯೇ ತಮ್ಮ ಸಿನಿಮಾ ಪ್ರೇಮ, ಸೂಪರ್ ಹಿಟ್ ಬಗೆಗಿನ ಭರವಸೆ ವ್ಯಕ್ತಪಡಿಸುತ್ತಲೇ, ತಮ್ಮ ಮೊದಲ ಹೆಜ್ಜೆಯಂಥಾ ಈ ಚಿತ್ರವನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು. ಈ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಾಧು ಕೋಕಿಲಾ, ಸೂಪರ್ ಹಿಟ್ ಸಿನಿಮಾ ತಂಡದ ಮೇಲೆ ದೇವರ ಆಶೀರ್ವಾದ ಇದೆ ಎಂಬ ವಿಚಾರವನ್ನು ಹೇಳುತ್ತಲೇ, ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ಪ್ರಚಾರದ ಪಟ್ಟುಗಳು ಈ ದಿನಮಾನದಲ್ಲಿ ಎಷ್ಟು ಮುಖ್ಯ ಎಂಬುದರ ಬಗ್ಗೆ ಚಿತ್ರತಂಡಕ್ಕೆ ಮನವರಿಕೆ ಮಾಡಿ ಕೊಡುತ್ತಲೇ, ಜನಪ್ರಿಯತೆಯ ಭರಾಟೆಯಲ್ಲಿ ವಹಿಸಬೇಕಾದ ಎಚ್ಚರದ ಬಗ್ಗೆಯೂ ಗಿಲ್ಲಿಗೆ ಕಿವಿ ಮಾತು ಹೇಳಿದರು.

ಈ ಚಿತ್ರಕ್ಕೆ ಸಾಹಿತ್ಯ, ಸಂಗೀತದ ಜವಾಬ್ದಾರಿಯೊಂದಿಗೆ ಒಂದು ವಿಶೇಷವಾದ ಪಾತ್ರದಲ್ಲಿಯೂ ನಟಿಸಿರುವ ಕವಿರತ್ನ ಡಾ.ವಿ ನಾಗೇಂದ್ರ ಪ್ರಸಾದ್ ಸೂಪರ್ ಹಿಟ್ ಮೂಡಿ ಬಂದಿರೋ ರೀತಿಯ ಬಗ್ಗೆ ಮೆಚ್ಚುಗೆ ಸೂಚಿಸುತ್ತಲೇ, ಗಿಲ್ಲಿಯ ಯಶದ ಪ್ರಭೆ ಸದರಿ ಚಿತ್ರಕ್ಕೆ ವರವಾಗಿರುವ ಬಗ್ಗೆ ಪ್ರಸ್ತಾಪಿಸಿದ್ದಲ್ಲದೇ, ಈ ಹಿಂದೆ ಯಾವುದೇ ಸಿನಿಮಾದಲ್ಲಿ ನಟಿಸಿದ್ದರೂ ಕೂಡಾ, ಅಂಥಾ ಚಿತ್ರಗಳಿಗೆ ಪ್ರಚಾರ ನೀಡಬೇಕಿರುವ ಕರ್ತವ್ಯದ ಬಗ್ಗೆಯೂ ಗಿಲ್ಲಿ ನಟನಿಗೆ ಪ್ರೀತಿಯಿಂದ ಕಿವಿ ಮಾತು ಹೇಳಿದರು. ಆ ನಂತರ ಮಾತಾಡಿದ ಈ ಸಿನಿಮಾದ ಕೇಂದ್ರ ಬಿಂದುವಾದ ಗಿಲ್ಲಿ, ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ಕೃತಜ್ನತೆ ಸಲ್ಲಿಸುತ್ತಲೇ ಒಟ್ಟಾರೆ ಚಿತ್ರೀಕರಣ ರಸಾನುಭವಗಳನ್ನು ಹಂಚಿಕೊಂಡರು. ಈ ಮಧ್ಯೆ ಇತ್ತೀಚೆಗೆ ಹೊತ್ತಿಕೊಂಡಿದ್ದ ವಿವಾದವೂ ಸೇರಿದಂತೆ ಒಂದಷ್ಟು ವಿಚಾರಗಳಿಗೆ ಸ್ಪಷ್ಟೀಕರಣ ಕೊಡುತ್ತಲೇ ಸೂಪರ್ ಹಿಟ್ ಚಿತ್ರವನ್ನು ನೋಡಿ ಹರಸುವಂತೆ ಕೇಳಿಕೊಂಡರು.

ವಿಜಯಲಕ್ಷ್ಮಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ಜಿ ಉಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗೌರವ್ ಶೆಟ್ಟಿ ಮತ್ತು, ಗಿಲ್ಲಿ ನಟ ನಾಯಕರಾಗಿ ನಟಿಸಿದ್ದಾರೆ. ಶ್ವೇತಾ ನಾಯಕಿಯಾಗಿ ಜೊತೆಯಾಗಿದ್ದಾರೆ. ನಾಗೇಂದ್ರ ಪ್ರಸಾದ್ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಇನ್ನುಳಿದಂತೆ, ಆರ್.ಡಿ ನಾಗಾರ್ಜುನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಮತ್ತು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡ್ರ್ಯಾಗನ್ ಮಂಜು, ಸಾಧು ಕೋಕಿಲ.ಆ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು, ವಂಶಿ, ಮಂಜಣ್ಣ, ಬಿ.ಎನ್ ಮಂಗಳ, ಮಂಗಳೂರು ಮೀನನಾಥ ಮುಂತಾದವರ ತಾರಾಗಣವಿದೆ. ಕಾಮಿಡಿ ಸಸ್ಪೆನ್ಸ್ ಥ್ರಿಲ್ಲರ್ ಜಾನರಿನ ಈ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ಇನ್ನೂರಕ್ಕು ಹೆಚ್ಚು ಚಿತ್ರಮಂದಿಗಳಲ್ಲಿ ಅದ್ದೂರಿಯಾಗಿ ತೆರೆಕಾಣುತ್ತೆ.

ಇದನ್ನೂ ಓದಿ : ಭಾರತದಲ್ಲಿ ಐಫೋನ್ 17 ಖರೀದಿಗೆ ಭರ್ಜರಿ ಆಫರ್ | ಆದರೆ ಷರತ್ತುಗಳು ಅನ್ವಯ!

Tags: Karnataka News beat
SendShareTweet
Previous Post

ಭಾರತದಲ್ಲಿ ಐಫೋನ್ 17 ಖರೀದಿಗೆ ಭರ್ಜರಿ ಆಫರ್ | ಆದರೆ ಷರತ್ತುಗಳು ಅನ್ವಯ!

Next Post

ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ

Related Posts

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?
ಸಿನಿಮಾ-ಮನರಂಜನೆ

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!
ಸಿನಿಮಾ-ಮನರಂಜನೆ

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!

‘ಮರಳಿ ಮನಸಾಗಿದೆ’ ಮೆಸೇಜ್ ಏನು?
ಸಿನಿಮಾ-ಮನರಂಜನೆ

‘ಮರಳಿ ಮನಸಾಗಿದೆ’ ಮೆಸೇಜ್ ಏನು?

ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!
ಸಿನಿಮಾ-ಮನರಂಜನೆ

ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!

Next Post
ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ

ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat