ಬೆಂಗಳೂರು : ವಾಟರ್ ಟ್ಯಾಂಕರ್ ಹರಿದ ಪರಿಣಾಮ 9 ವರ್ಷದ ಬಾಲಕಿ ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ HAL ರಸ್ತೆಯ ಶಿವಲಿಂಗಯ್ಯ ಕಾಲೋನಿಯಲ್ಲಿ ನಡೆದಿದೆ. ಅನುಶ್ರೀ ಸಾವನ್ನಪ್ಪಿದ ಬಾಲಕಿ.
ಬೆಳಗ್ಗೆ ಕಟ್ಟಡವೊಂದಕ್ಕೆ ವಾಟರ್ ಸಪ್ಲೈಗೆ ಟ್ಯಾಂಕರ್ ಬಂದಿತ್ತು. ಈ ವೇಳೆ ಆಟ ಆಡುತ್ತಿದ್ದ ಅನುಶ್ರೀಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಅನುಶ್ರೀ ಸಾವನ್ನಪ್ಪಿದ್ದಾಳೆ.
ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ವಾಸವಿದ್ದ ಕಲಬುರಗಿ ಮೂಲದ ದಂಪತಿಯ ಮಗಳು ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದುಮ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಜೀವನ್ ಭೀಮನಗರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.