ಬೆಂಗಳೂರು : ಪ್ರೀತಿ ನಿರಾಕರಿಸಿದ್ದಕ್ಕೆ ಯಾಮಿನಿ ಪ್ರಿಯಾ ಎನ್ನುವ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗೈದು ಬಳಿಕ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದ ವಿಘ್ನೇಶ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ನಿನ್ನೆ(ಅ.16) ಕಾಲೇಜು ಮುಗಿಸಿಕೊಂಡು ವಾಪಸ್ ಮನೆಗೆ ಬರುತ್ತಿದ್ದ ವೇಳೆ ಮಂತ್ರಿಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ಪ್ರಿಯಾಳನ್ನು ವಿಘ್ನೇಶ್ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ. ಪ್ರಕರಣ ಸಂಬಂಧ ಶ್ರೀರಾಂಪುರ ಪೊಲೀಸರು ಕಾರ್ಯಚರಣೆ ನಡೆಸಿ ವಿಘ್ನೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
20 ವರ್ಷದ ಯಾಮಿನಿ ಪ್ರಿಯಾ ನಿನ್ನೆ (ಅಕ್ಟೋಬರ್ 17) ಕಾಲೇಜು ಮುಗಿಸಿಕೊಂಡು ವಾಪಸ್ ಮನೆಗೆ ಬರುತ್ತಿದ್ದಳು. ಮಂತ್ರಿಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ಪ್ರಿಯಾಳನ್ನು ವಿಘ್ನೇಶ್ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿದ್ದಾನೆ. ಬಳಿಕ ಕತ್ತು ಕೊಯ್ದು ಪರಾರಿಯಾಗಿದ್ದ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶ್ರೀರಾಂಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ ಹಂತಕ ವಿಘ್ನೇಶ್ ಬಂಧನಕ್ಕೆ ಬಲೆ ಬೀಸಿದ್ದರು. ಅಂತಿಮವಾಗಿ ಇಂದು (ಅ.17) ಸೋಲದೇವನಹಳ್ಳಿಯಲ್ಲಿ ಆರೋಪಿ ವಿಘ್ನೇಶ್ ಸಿಕ್ಕಿಬಿದ್ದಿದ್ದು, ವಿಚಾರಣೆಗೊಳಪಡಿಸಿದ್ದಾರೆ.