ಬೆಂಗಳೂರು: ಸ್ನೇಹಿತನೇ ಗೆಳತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಗೆಳತಿಯ ಮೇಲೆ ನಡೆದಿರುವ ಅತ್ಯಾಚಾರ (Rape) ದ ಆರೋಪ ಬೆಂಗಳೂರಿನ ಮೈಕೋ ಲೇಔಟ್ ಠಾಣಾ (Mico Layout Police Station) ವ್ಯಾಪ್ತಿಯಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ.ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಆರೋಪದ ಅಡಿ ದೂರು ನೀಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.