ರಾಮನಗರ : ಕನ್ನಡ ಚಿತ್ರರಂಗದ ಬಗ್ಗೆ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಮನಗರದ ಐಜೂರು ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಮೊದಲ ಆದ್ಯತೆ ನೀಡಬೇಕು, ಪರಭಾಷೆ ಚಿತ್ರಗಳನ್ನು ಹೆಚ್ಚು ಪ್ರೋತ್ಸಾಹಿಸಬಾರದು, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಬೇರೆ ಭಾಷೆಯವರಾಗಿದ್ದಾರೆ ಇಲ್ಲಿ ಕನ್ನಡಿಗರು ಅಧ್ಯಕ್ಷರಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಕನ್ನಡ ವಾಟಾಳ್ ಪಕ್ಷ ನವೆಂಬರ್ ನಿಂದ ಗಂಭೀರವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.