ಪಣಜಿ: ಗೋವಾದ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ಮ್ಯಾನೇಜರ್‌ನನ್ನೂ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಕ್ಲಬ್ ಮಾಲೀಕನ ವಿರುದ್ಧವೂ ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ಪ್ರಧಾನ ವ್ಯವಸ್ಥಾಪಕನನ್ನ ಬಂಧಿಸಲಾಗಿದ್ದು, ಮಾಲೀಕನ ವಿರುದ್ಧವೂ ವಾರಂಟ್ ಜಾರಿಗೊಳಿಸಲಾಗಿದೆ.
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
ಕ್ಲಬ್ ಮುಚ್ಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ಪ್ರವಾಸಿಗರು ಸೇರಿ 25 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ | ತಾಳೆಗರಿಗಳು, ಕಿರಿದಾದ ದಾರಿಯೇ ಮೃತ್ಯುಕೂಪವಾಯಿತೇ?



















