ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದೂ ಕೂಡ ಏರಿಕೆ ಕಂಡಿವೆ. ಚಿನ್ನದ ಬೆಲೆ 145 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಏರಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 10,671 ರೂ. ನಿಂದ 10,845 ರೂ ಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 11,831 ರೂ ಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 150 ರೂನಿಂದ 151 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 161 ರೂ ಆಗಿದೆ.
ಎರಡು ದಿನದಲ್ಲಿ 200ಕ್ಕೂ ಹೆಚ್ಚು ರೂಗಳಷ್ಟು ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯ ಏರಿಕೆಯೂ ಮುಂದುವರಿದಿದೆ. ನಿನ್ನೆಯಂತೆ ಇಂದೂ ಕೂಡ ಬೆಳ್ಳಿ ಬೆಲೆ 1 ರೂ ಹೆಚ್ಚಿದೆ. ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಮತ್ತೆ ಹೊಸ ದಾಖಲೆ ಸ್ಥಾಪಿಸಿವೆ. ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 1,08,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,18,310 ರುಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,08,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಂಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,100 ರೂ ಇದೆ.
“ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ”
• 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,831 ರೂ
• 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,845 ರೂ
• 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 8,873 ರೂ
• ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ
“ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ”
• 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,831 ರೂ
• 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,845 ರೂ
• ಬೆಳ್ಳಿ ಬೆಲೆ 1 ಗ್ರಾಂ ಗೆ: 151 ರೂ


















