ಜೈಪುರ: ಪವರ್-ಲಿಫ್ಟರ್ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ 270 ಕೆಜಿ ರಾಡ್ ಕುತ್ತಿಗೆಗೆ ಬಿದ್ದು ಕ್ರೀಡಾಪಟು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಜಸ್ಥಾನದ ಚಿನ್ನದ ಪದಕ ವಿಜೇತ ಕ್ರೀಡಾಪಟು ಯಶ್ತಿಕಾ ಆಚಾರ್ಯ(17) ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ಸಾವನ್ನಪ್ಪಿರುವ ಯಶ್ತಿಕಾ, ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಜೂನಿಯರ್ ರಾಷ್ಟ್ರೀಯ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆಯಾಗಿದ್ದರು. ಕೂಡಲೇ ಯಶ್ತಿಕಾ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಘಟನೆ ವೇಳೆ ತರಬೇತುದಾರರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಆದರೆ, ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎನ್ನಲಾಗಿದೆ.