ಬೆಂಗಳೂರು : ಕಳೆದೊಂದು ತಿಂಗಳಿಂದ ಭಾರಿ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇತ್ತೀಚೆಗೆ ಇಳಿಕೆಯ ಹಾದಿಗೆ ಮರಳಿದೆ. ಗುರುವಾರ ಕೂಡ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಕಂಡು ಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 460 ರುಪಾಯಿ ಇಳಿಕೆ ಕಂಡು ಬಂದು, 14,155 ರುಪಾಯಿ ಆಗಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 502 ರುಪಾಯಿ ಕಡಿಮೆಯಾಗಿ 15,442 ರುಪಾಯಿಗೆ ಬಂದು ತಲುಪಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,240 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,41,550 ರುಪಾಯಿ ಹಾಗೂ 100 ಗ್ರಾಂಗೆ ನೀವು 14,15,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,23,536 ರುಪಾಯಿ ಹಾಗೂ 10 ಗ್ರಾಂಗೆ ನೀವು 1,54,420 ರುಪಾಯಿ ಹಾಗೂ 100 ಗ್ರಾಂಗೆ ನೀವು 15,44,200 ರುಪಾಯಿ ನೀಡಬೇಕಾಗುತ್ತದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,155 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,442 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,170 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,457 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,155 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,442 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,155 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,442 ರುಪಾಯಿ ಇದೆ.
ಇದನ್ನೂ ಓದಿ : ಮಕ್ಕಳ ಭವಿಷ್ಯಕ್ಕಾಗಿ LIC ಹೊಸ ಯೋಜನೆ | ದಿನಕ್ಕೆ 150 ರೂ. ಉಳಿಸಿ.. 19 ಲಕ್ಷ ರೂ. ಗಳಿಸಿ!



















