ಬೆಂಗಳೂರು : ಕಳೆದ ಕೆಲ ದಿನಗಳಿಂದ ಭಾರಿ ಏರಿಕೆಯ ಹಾದಿ ಹಿಡಿದಿದ್ದ ಚಿನ್ನದ ಬೆಲೆಯು ಕೊನೆಗೂ ಇಳಿಮುಖದತ್ತ ಸಾಗುತ್ತಿದೆ. ಸೋಮವಾರ (ಮೇ 18) ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವುದು ಗ್ರಾಹಕರು ನಿಟ್ಟುಸಿರು ಬಿಡುವಂತೆ ಮಾಡಿದೆ. ಸೋಮವಾರ ಬೆಂಗಳೂರಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಧಾರಣೆಯಲ್ಲಿ 71 ರೂಪಾಯಿ ಇಳಿಕೆಯಾಗಿದೆ. ಇನ್ನು, ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 65 ರೂಪಾಯಿ ಕಡಿಮೆಯಾಗಿದೆ.
ಇದರೊಂದಿಗೆ ಬೆಂಗಳೂರಿನಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯು 1,56,220 ರೂಪಾಯಿ ಆಗಿದೆ. ಹಾಗೆಯೇ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯು 1,43,200 ರೂಪಾಯಿ ಆಗಿದೆ. ಹಾಗಾಗಿ, ಸೋಮವಾರ ಜನ ನಿರುಮ್ಮಳವಾಗಿ ಚಿನ್ನವನ್ನು ಖರೀದಿಸಬಹುದಾಗಿದೆ. ಹಾಗೆಯೇ, ಸತತ ಮೂರು ದಿನಗಳಿಂದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಇಳಿಕೆ ಕಂಡಂತಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಒಂದೂವರೆ ತಿಂಗಳಲ್ಲಿಯೇ ಕನಿಷ್ಠ ಮಟ್ಟಕ್ಕೆ ಕುಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ (ಸುಮಾರು 28 ಗ್ರಾಂ) ಚಿನ್ನದ ಬೆಲೆಯು 4,488 ಡಾಲರ್ ಆಗಿದೆ. ಇದರಿಂದಾಗಿ ಭಾರತದಲ್ಲಿಯೂ ಚಿನ್ನದ ದರದಲ್ಲಿ ಇಳಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ
ಸೋಮವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾದರೆ, ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 1 ಕೆ.ಜಿ ಚಿನ್ನದ ಬೆಲೆಯಲ್ಲಿ 10 ಸಾವಿರ ರೂಪಾಯಿ ಜಾಸ್ತಿಯಾಗಿದೆ. ಒಂದು ಕೆ.ಜಿ ಬೆಳ್ಳಿಯ ಬೆಲೆಯು ಈಗ 2.90 ಲಕ್ಷ ರೂಪಾಯಿ ಆಗಿದೆ. ಕಳೆದ ನಾಲ್ಕು ದಿನಗಳಲ್ಲಿ ಬೆಳ್ಳಿಯ ಬೆಲೆಯಲ್ಲಿ 30 ಸಾವಿರ ರೂಪಾಯಿ ಕುಸಿತ ಆಗಿತ್ತು. ಭಾನುವಾರ ಬೆಲೆಯು ಯಥಾಸ್ಥಿತಿ ಕಾಪಾಡಿಕೊಂಡಿತ್ತು. ಈಗ ಮತ್ತೆ ಏರಿಕೆಯಾಗಿದೆ.
ಇದನ್ನೂ ಓದಿ : ಲೀಸ್ & ಬಾಡಿಗೆ ಮನೆಗಳ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ – ‘ಜಾನ್ಸ್ ಅಸೆಟ್’ ಕಂಪನಿ ವಿರುದ್ಧ FIR!


















