ದೇವನಹಳ್ಳಿ: ಗುದದ್ವಾರದಲ್ಲಿ ಕೋಟಿ ರೂ. ಮೌಲ್ಯದ ಚಿನ್ನ ಇಟ್ಟುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗುದದ್ವಾರದಲ್ಲಿ ಚಿನ್ನ ಅಡಗಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಲಂಕಾದ ಕೊಲೊಂಬೊದಿಂದ 6E 1168 ವಿಮಾನದಲ್ಲಿ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿದ್ದ ವೇಳೆ ತಪಾಸಣೆ ನಡೆಸಿದಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.
ತಪಾಸಣೆ ಸಂದರ್ಭದಲ್ಲಿ ಮೂವರು ಆರೋಪಿಗಳು ಪೆಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಚಿನ್ನ ಅಡಗಿಸಿ ಇಟ್ಟುಕೊಂಡಿರುವುದು ಕಂಡು ಬಂದಿದೆ. ಆರೋಪಿಗಳು ಪೇಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಚಿನ್ನ ಅಡಗಿಸಿಟ್ಟುಕೊಂಡಿದ್ದರು ಎನ್ನಲಾಗಿದೆ. ಆರೋಪಿಗಳಿಂದ 1 ಕೋಟಿ 19 ಲಕ್ಷದ 38 ಸಾವಿರ ಮೌಲ್ಯದ 1,670 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಮೂವರನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.