ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ನಟಿಸಿದ್ದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಹೀಗಾಗಿ ಗಣೇಶ ಗೆಲುವಿನ ಅಲೆಯಲ್ಲಿದ್ದಾರೆ. ಈ ಚಿತ್ರದ ಬಗ್ಗೆ ಒಟಿಟಿಯಲ್ಲೂ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಟಾಲಿವುಡ್ನ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಗಣೇಶಗೆ ಗಾಳ ಹಾಕಿದೆ ಎಂದು ತಿಳಿದು ಬಂದಿದೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆ ಬಂಡವಾಳ ಹೂಡಲಿರುವ #PMF49 ಚಿತ್ರದಲ್ಲಿ ಗಣೇಶ್ ಅಭಿನಯಿಸಲಿದ್ದಾರೆ. ಈ ಚಿತ್ರದ ಮೂಲಕ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆ ಕನ್ನಡದಲ್ಲಿಯೂ ದೊಡ್ಡ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ.
ತೆಲುಗು ಚಿತ್ರೋದ್ಯಮದಲ್ಲಿ ಈಗಾಗಲೇ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಹೆಸರು ಮಾಡಿದೆ. ಈಗ ಸ್ಯಾಂಡಲ್ ವುಡ್ ನತ್ತ ಮುಖ ಮಾಡಿದೆ. ಡ್ಯಾನ್ಸ್ ಕೊರಿಯೋಗ್ರಾಫರ್ ಧನಂಜಯ್ ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. ಆದರೆ, ಚಿತ್ರದ ಬಗ್ಗೆ ಸಂಪೂರ್ಣ ಅಪ್ಡೇಟ್ ಸಿಕ್ಕಿಲ್ಲ.