ಬೆಂಗಳೂರು: ಹೊಸ ವರ್ಷದ ಆರಂಭದಲ್ಲಿಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC) ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಟಿಕೆಟ್ ದರದಲ್ಲಿ ಭಾರಿ ರಿಯಾಯಿತಿ ಘೋಷಿಸಿದೆ.
ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಟಿಕೆಟ್ ದರದಲ್ಲಿ ಶೇ.5ರಿಂದ ಶೇ.15ರಷ್ಟು ಟಿಕೆಟ್ ದರ ರಿಯಾಯಿತಿ ಘೋಷಣೆ ಮಾಡಿದೆ. ಎಲ್ಲಾ ರೀತಿಯ KSRTC ಬಸ್‌ಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10 ರಿಂದ ಶೇ. 15ರ ವರೆಗೆ ಪ್ರಯಾಣದರಗಳನ್ನು ಇಳಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೆಎಸ್‌ಆರ್‌ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್ ಬಸ್‌ಗಳ ಪ್ರಯಾಣ ದರಗಳಲ್ಲಿ 5-15% ರಿಯಾಯಿತಿ ಘೋಷಿಸಿದೆ. ಜನವರಿಯಿಂದ ಮಾರ್ಚ್‌ವರೆಗೆ ಪ್ರಯಾಣಿಕರ ದಟ್ಟಣೆ ಕಡಿಮೆಯಿರುವ ಹಿನ್ನಲೆ ಟಿಕೆಟ್ ದರವನ್ನು ಕಡಿಮೆ ಮಾಡಿದೆ. ಆದರೆ ಈ ದರ ವಾರದ ದಿನಗಳಲ್ಲಿ ಮಾತ್ರ ಅನ್ವಯವಾಗುತ್ತದೆ. ವಾರಂತ್ಯಗಳಲ್ಲಿ ಅನ್ವಯಿಸುವುದಿಲ್ಲ.
KSRTC ಬಸ್ ನಲ್ಲಿ ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಮುಂಗಡ ಬುಕ್ಕಿಂಗ್ ಮಾಡಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ಹಾಗೂ ಒಂದು ಕಡೆ ಹಾಗೂ ಎರಡು ಕಡೆಯ ಪ್ರಯಾಣದ ಬುಕ್ಕಿಂಗ್ ಒಟ್ಟಿಗೆ ಮಾಡಿದದರೆ, ಪ್ರಯಾಣ ದರಕ್ಕೆ ಶೇಕಡ 10ರಷ್ಟು ರಿಯಾಯಿತಿ ನೀಡಲಾಗಿದೆ.
ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರಗಳಲ್ಲಿ ಶೇಕಡ 5 ರಿಂದ 15% ರವರೆಗೆ ರಿಯಾಯಿತಿ ನೀಡಲಾಗಿದೆ.
ಯಾವ ಬಸ್ ಗಳಲ್ಲಿ ದರ ಕಡಿತ
ವೋಲ್ವೋ, ಅಂಬಾರಿ, ಕ್ಲಬ್ ಕ್ಲಾಸ್, ಪಲ್ಲಕಿ ಉತ್ಸವ, ಫ್ಲೈ ಬಸ್, ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಬಸ್‌ಗಳ ಟಿಕೆಟ್ ದರವನ್ನು ಆಯ್ದ ಮಾರ್ಗಗಳಲ್ಲಿ ಕಡಿಮೆ ಮಾಡಲಾಗಿದೆ.
ಈ ಮಾರ್ಗದ ಬಸ್ ಟಿಕೆಟ್ ದರದಲ್ಲಿ ರಿಯಾಯಿತಿ
ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು.
ಅಂತರಾಜ್ಯ ಬಸ್ ಪ್ರಯಾಣ ದರದಲ್ಲಿ ರಿಯಾಯಿತಿ
ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪುಣೆ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಎಸಿ ಸ್ಲೀಪರ್ ಮಾದರಿಯ ಬಸ್‌ಗಳ ಟಿಕೆಟ್ ದರದಲ್ಲಿ (ಶೇಕಡ 5 ರಿಂದ 15 ರಿಯಾಯಿತಿ) ಭರ್ಜರಿ ರಿಯಾಯಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ಅಧಿಕೃತ ವೆಬ್‌ಸೈಟ್‌ನಲ್ಲಿ ksrtc.in ಪಡೆಯಬಹುದಾಗಿದೆ.
ಇದನ್ನೂ ಓದಿ: ಕುಂದಾಪುರದಲ್ಲಿ KSRTC ಬಸ್‌ಗೆ ಟಿಪ್ಪರ್ ಡಿಕ್ಕಿ | 15 ಮಂದಿಗೆ ಗಾಯ.. ಮೂವರು ವಿದ್ಯಾರ್ಥಿಗಳು ಗಂಭೀರ!



















